ಯೋಗವು ನಮ್ಮ ಪ್ರಾಚೀನ ಸಂಪ್ರದಾಯದ ಅಮೂಲ್ಯ ಕೊಡುಗೆಯಾಗಿದೆ: ಪಾಲಿಕೆ ಮಾಜಿ ಸದಸ್ಯ ಎಚ್.ಎನ್.ಗಂಗಾದರ್

ಬೆಂಗಳೂರು: ಯೋಗವು ನಮ್ಮ ಪ್ರಾಚೀನ ಸಂಪ್ರದಾಯದ ಅಮೂಲ್ಯ ಕೊಡುಗೆಯಾಗಿದೆ. ಯೋಗವು ಮನಸ್ಸು ಮತ್ತು ದೇಹ, ಆಲೋಚನೆ ಮತ್ತು ಕ್ರಿಯೆಯ ಏಕತೆಯನ್ನು ಒಳಗೊಂಡಿರುತ್ತದೆ ನಮ್ಮ ಆರೋಗ್ಯ ಮತ್ತು ನಮ್ಮ ಯೋಗಕ್ಷೇಮಕ್ಕೆ ಮೌಲ್ಯಯುತವಾದ ಒಂದು ಸಮಗ್ರ ವಿಧಾನವೇ ಯೋಗ ಮಾಡುವುದು ಎಂದು ಪಾಲಿಕೆ ಮಾಜಿ ಸದಸ್ಯ ಎಚ್.ಎನ್.ಗಂಗಾದರ್ ತಿಳಿಸಿದರು. ವಿಶ್ವ ಯೋಗ ದಿನದ ಪ್ರಯುಕ್ತ ಹೆಗ್ಗನಹಳ್ಳಿಯ ನಿಸರ್ಗ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಯೋಗವೆಂದರೆ ಕೇವಲ ವ್ಯಾಯಾಮವಲ್ಲ ಇದು ನಿಮ್ಮೊಂದಿಗೆ, ಪ್ರಪಂಚ ಮತ್ತು ಪ್ರಕೃತಿಯೊಂದಿಗೆ ಏಕತೆಯ ಅರ್ಥವನ್ನು ಕಂಡುಕೊಳ್ಳುವ ಒಂದು ಮಾರ್ಗವಾಗಿದೆ. ಅಲ್ಲದೇ‌ ಇದೊಂದು ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದ್ದು ವಿಶ್ವಾದ್ಯಂತ ಹೆಚ್ಚಿನ ಜನರು ತಮ್ಮ ಮಾನಸಿಕ ಒತ್ತಡ ಮತ್ತು ದೈಹಿಕ ಸೌಂದರ್ಯಕ್ಕಾಗಿ ಯೋಗದ ಮೊರೆ ಹೋಗುತ್ತಿರುವುದು ನಿಮಗೆಲ್ಲ ತಿಳಿದಿದೆ ಎಂದರು. ಯೋಗದ ಪ್ರಾಮುಖ್ಯತೆ ಅರಿತ ಜನ ತಮ್ಮ ಉತ್ತಮ ಆರೋಗ್ಯಕ್ಕಾಗಿ ಯೋಗ ಅಭ್ಯಸಿಸಲು ಮುಂದಾಗಿದ್ದಾರೆ. ಆದರೆ…

Read More