ಕೆ ಡಬ್ಲ್ಯೂ ಜೆ ವಿ ನೆಲಮಂಗಲ ತಾಲೂಕು ಘಟಕಕ್ಕೆ ನೂತನ ಅಧ್ಯಕ್ಷರಾಗಿ ಕೆ ಎಸ್ ಮಂಜೇಶ್ ಅವಿರೋಧ ಆಯ್ಕೆ

ನೆಲಮಂಗಲ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ದ್ವನಿ ಸಂಘಟನೆ ನೆಲಮಂಗಲ ತಾಲ್ಲೂಕು  ಘಟಕಕ್ಕೆ  ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ವೀರಸಾಗರ ಭಾನುಪ್ರಕಾಶ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನೂತನ ಅಧ್ಯಕ್ಷರಾಗಿ ಕೆ ಎಸ್ ಮಂಜೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಾಲ್ಲೂಕಿನ ಪರಿವೀಕ್ಷಣ ಮಂದಿರದಲ್ಲಿ ಕರೆಯಲಾಗಿದ್ದ ಸರ್ವ ಸದಸ್ಯರ ಸಭೆಯಲ್ಲಿ ಎಲ್ಲಾ ಸದಸ್ಯರ ಅಭಿಪ್ರಾಯದಂತೆ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಬಳಿಕ ಮಾತನಾಡಿದ ಅಧ್ಯಕ್ಷರಾದ ಕೆ ಎಸ್ ಮಂಜೇಶ್ ಪತ್ರಕರ್ತರು ಸಾಕಷ್ಟ ಸಮಸ್ಯೆಗಳನ್ನು ಎದುರಿಸುತ್ತಿದ್ದು ಈ ಎಲ್ಲ ಸಮಸ್ಯೆಗಳನ್ನು ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ ರವರ ಸಹಕಾರದೊಂದಿಗೆ  ಸರ್ಕಾರದ ಗಮನಕ್ಕೆ ತಂದು ಪತ್ರಕರ್ತರಿಗೆ  ಸಿಗಬೇಕಾದ ಸೌಲಭ್ಯಗಳನ್ನು ಕೊಡಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ ಜೊತೆಗೆ ತಾಲೂಕಿನಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಗೊಳಿಸುವ ಭರವಸೆ ನೀಡಿದರು. ತನ್ನನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಎಲ್ಲಾ ಸದಸ್ಯರಿಗೂ ಮಾಜಿ ಅಧ್ಯಕ್ಷರಾದ ವೀರಸಾಗರ ಭಾನುಪ್ರಕಾಶ್ ರವರಿಗೆ ಧನ್ಯವಾದವನ್ನು ತಿಳಿಸಿದರು

Read More