ಇಷ್ಟಾರ್ಥ ಕರುಣಿಸೋ ಕೆಂಗನಹಳ್ಳಿ ಆದಿಶಕ್ತಿ ಮಾರಮ್ಮ ಜಾತ್ರೆ ಅದ್ದೂರಿಯಾಗಿ ಜರುಗಿತು

ಪೀಣ್ಯದಾಸರಹಳ್ಳಿ : ಕೆಂಗನಹಳ್ಳಿ ಮಾರಮ್ಮ ದೇವಿ ಜಾತ್ರೆ ಪ್ರತಿ 5 ವರ್ಷಕ್ಕೊಮ್ಮೆ ಅದ್ದೂರಿಯಾಗಿ ನಡೆಯುತ್ತ ಬಂದಿದ್ದು ತುಂಬಾ ಭಕ್ತರನ್ನು ಹೊಂದಿರುವ ದೇವಿಯ ಜಾತ್ರೆಗೆ ಅಕ್ಕಪಕ್ಕದ ಊರಿನ ಜನರೆಲ್ಲ ಸೇರಿ ಅದ್ದೂರಿಯಾಗಿ ಆಚರಿಸುತ್ತಾರೆ. ಆದರೆ ಕಳೆದ ಎರಡು ವರ್ಷಗಳಿಂದ ಕೊರೋನ ಹಿನ್ನೆಲೆಯಲ್ಲಿ ಜಾತ್ರೆಯನ್ನು ಸರಳವಾಗಿ ಆಚರಿಸಿದ್ದರು. ಆದರೆ ಈ ಭಾರಿ ಸಾವಿರಾರು ಜನರು ತಂಡೋಪತಂಡವಾಗಿ ಬಂದು ದೇವಿಯ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಬೆಂಗಳೂರು ಉತ್ತರ ತಾಲ್ಲೋಕಿನ ಕೆಂಗನಹಳ್ಳಿ ಗ್ರಾಮದಲ್ಲಿ ಶ್ರೀ ಮಾರಮ್ಮ ದೇವಿ ದೇವಸ್ಥಾನ, ಶ್ರೀ ಚನ್ನಕೇಶವಸ್ವಾಮಿ ದೇವಸ್ಥಾನ ಹಾಗೂ ಶ್ರೀ ಆಂಜನೇಯಸ್ವಾಮಿ ದೇವಸ್ಥಾನ ಸೇವಾ ಸಮಿತಿಗಳು ಜಂಟಿಯಾಗಿ ಈ ಜಾತ್ರಾ ಮಹೋತ್ಸವ ನಡೆಸುತ್ತಿವೆ. ಬೆಂಗಳೂರು ಉತ್ತರ ತಾಲೂಕು, ದಾಸನಪುರ ಹೋಬಳಿ, ಕೆಂಗನಹಳ್ಳಿ ಗ್ರಾಮದಲ್ಲಿ ಪುರಾತನ ಕಾಲದಿಂದ ನೆಲೆಸಿರುವ ಶ್ರೀ ಮಾರಮ್ಮ ದೇವಿಯ ಜಾತ್ರೆಯು ಹಲವು ವರ್ಷಗಳಿಂದ ಪ್ರತಿ 3ವರ್ಷಕೊಮ್ಮೆ ಜಾತ್ರೆ ನಡೆದುಕೊಂಡು ಬರುತ್ತಿದ್ದು ಈಗ 5ವರ್ಷಕೊಮ್ಮೆ ಜಾತ್ರೆ…

Read More