ಮತ್ತೊಂದು ಪರೀಕ್ಷಾ ಅಕ್ರಮದ ಬಗ್ಗೆ ವರದಿ ಕೇಳಿದ ಸಿಎಂ ಸಿದ್ದರಾಮಯ್ಯ: ಅಕ್ರಮ ಸಾಭೀತಾದರೆ ನೇಮಕಾತಿ ರದ್ದು!?

ಬೆಂಗಳೂರು: ಕಳೆದ ಬಿಜೆಪಿ ಸರ್ಕಾರದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಅಭಿಯೋಜಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಆರೋಪ, ವ್ಯಾಪಕ ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪರೀಕ್ಷಾ ಅಕ್ರಮದ ಬಗ್ಗೆ ಸಿಎಂ ಸಿದ್ದರಾಮಯ್ಯ ವರದಿ ಕೇಳಿದ್ದಾರೆ. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದು ಅಕ್ರಮ ಎಸಗಿದ ತಪ್ಪಿತಸ್ಥರ ವಿವರದೊಂದಿಗೆ 10 ದಿನಗಳೊಳಗೆ ವರದಿ ಕೊಡುವಂತೆ ಸಿಎಂ ಸೂಚನೆ ನೀಡಿದ್ದು ಇಲಾಖಾ ಹಂತದ ತನಿಖೆಗೆ ಸಿಎಂ ನೀಡಿದ್ದಾರೆ.‌ ಅಕ್ರಮ ಸಾಭೀತಾದಲ್ಲಿ ನೇಮಕಾತಿ ರದ್ದಾಗುವ ಆತಂಕ ಆಯ್ಕೆಯಾದ ಅಭ್ಯರ್ಥಿಗಳಲ್ಲಿ ಸೃಷ್ಟಿಯಾಗಿದೆ.

Read More