ಕೆಟ್ಟು ನಿಂತ ಕುಡಿಯುವ ನೀರಿನ ಯಂತ್ರ: ಬೇಸಿಗೆಯಲ್ಲಿ ತಾಲೂಕು ಕಚೇರಿಗೆ ಬರುವ ಸಾರ್ವಜನಿಕರು ಹೈರಾಣು

ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ತಾಂಡವ ಆಡುತ್ತಿದೆ, ಎಲ್ಲೆಲ್ಲೂ ಕುಡಿಯುವ ನೀರಿಗಾಗಿ ಆಹಾಕಾರ ಎದುರಾಗಿದೆ. ಈಗಿರಿವಾಗ ತನ್ನ‌ ನಿತ್ಯ ಕೆಲಸ ಕಾರ್ಯಗಳಿಗೆ ತಾಲೂಕು ಕಚೇರಿಗೆ ದೂರದೂರುಗಳಿಂದ ಬರುವ ರೈತಾಪಿ ವರ್ಗದ ಜನರು ದಣಿದಾಗ ತಾಲೂಕು ಕಚೇರಿಯಲ್ಲಿ ಕುಡಿಯುವ ನೀರು ಸಿಗದೆ ಪರದಾಡುವಂತಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕು ಕಚೇರಿಯಲ್ಲಿ ಈ ಪರಿಸ್ಥಿತಿ ಎದುರಾಗಿದ್ದು, ಕುಡಿಯುವ ನೀರಿಲ್ಲದೆ ಸಾರ್ವಜನಿಕರು ಪರದಾಡುವಂತಾಗಿದೆ. ಇನ್ನೂ ಖಾಸಗಿ ಕಂಪನಿಯೊಂದು ತನ್ನ ಸಿಎಸ್‌ಆರ್ ನಿಧಿಯಲ್ಲಿ ಒಂದು ಶುದ್ದ ಕುಡಿಯುವ ನೀರಿನ ಘಟಕವನ್ನು ಸ್ಥಾಪಿಸಿದ್ದರು, ಅದು ಸೂಕ್ತ ನಿರ್ವಹಣೆ ಇಲ್ಲದೆ ಕೆಟ್ಟು ನಿಂತಿದೆ. ತಾವು ಸೌಕರ್ಯ ಕಲ್ಪಿಸದೆ, ಖಾಸಗಿಯಿಂದ ಬರುವ ಅನುಕೂಲಗಳನ್ನ ಸದ್ಬಳಕೆ ಮಾಡಿಕೊಳ್ಳದೆ ಸೂಕ್ತ ಕುಡಿಯುವ ನೀರು ಒದಗಿಸದ ತಾಲೂಕು ಆಡಳಿತದ ವಿರುದ್ದ ಸಾರ್ವಜನಿಕರು ಕಿಡಿಕಾರಿದ್ದಾರೆ. ಇನ್ನೂ ಈ ಬಗ್ಗೆ ಸಾಮಾಜಿಕ ಹೋರಾಟಗಾರರಾದ ಗಂಗಾಧರ್ ಜಯನಗರ ಮಾತನಾಡಿ, ಈ ವಿಚಾರದಲ್ಲಿ ಅಧಿಕಾರಿಗಳ ಗಮನಕ್ಕೆ…

Read More