ದಿನಕ್ಕೆರಡು ಬಾರಿ ಆ ಯುವತಿಗೆ ತಪ್ಪದೆ ಕರೆ ಮಾಡುತ್ತಿದ್ದ ಪ್ರಜ್ವಲ್!? ಆಕೆಯ ಹಿಂದೆ ಬಿದ್ದ ಎಸ್‌ಐಟಿ

ಬೆಂಗಳೂರು: ವಿದೇಶದಲ್ಲಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಸದ್ಯದಲ್ಲೇ ವಿಶೇಷ ತನಿಖಾ ತಂಡದ ಎದುರು ಶರಣಾಗಲಿದ್ದಾರೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ. ಈ ನಡುವೆ ಸ್ಫೋಟಕ ರಹಸ್ಯವೊಂದು ಬಯಲಾಗಿದೆ. ಯಾರೊಂದಿಗೂ ಸಂಪರ್ಕದಲ್ಲಿಲ್ಲದ ಪ್ರಜ್ವಲ್ ರೇವಣ್ಣ ಆ ಒಂದು ನಂಬರ್‌ಗೆ (Mobile Number) ಮಾತ್ರ ದಿನಕ್ಕೆ ಎರಡು ಬಾರಿ ಕರೆ ಮಾಡುತ್ತಿದ್ದಾರೆ. ಅಷ್ಟಕ್ಕೂ ಪ್ರಜ್ವಲ್ ಕರೆ ಮಾಡುತ್ತಿರುವುದು ಬೇರೆ ಯಾರಿಗೂ ಅಲ್ಲ, ತಾನೂ ಮದುವೆ ಆಗಬೇಕು ಅಂದುಕೊಂಡಿದ್ದ ಯುವತಿಗೆ ಎಂದು ಮೂಲಗಳು ತಿಳಿಸಿವೆ. ಇದೇ ತಿಂಗಳಲ್ಲಿ ಪ್ರಜ್ವಲ್ ಆ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡ್ಕೋಬೇಕು ಅಂದುಕೊಂಡಿದ್ದರಂತೆ, ಆ ಹುಡುಗಿಗೆ ದಿನಕ್ಕೆರಡು ಬಾರಿ ಫೋನ್ ಮಾಡಿ ಮಾತನಾಡುತ್ತಿದ್ದಾರೆ ಎಂದು ಹೇಳಲಾಗಿದೆ. ಈ ಮಾಹಿತಿ ತಿಳಿದಕೂಡಲೇ ಎಸ್‌ಐಟಿ ಆ ಯುವತಿಯ ಚಲನವಲನಗಳ ಮೇಲೆ ನಿಗಾ ವಹಿಸಿದೆ. ಆ ಮೂಲಕ ಪ್ರಜ್ವಲ್ ಎಲ್ಲಿದ್ದಾರೆ ಎಂಬ ಹುಡುಕಾಟವೂ ನಡೆಯುತ್ತಿದೆ ಎಂದು ಉನ್ನತ ಮೂಲಗಳಿಂದ…

Read More

ಯಾವ ಬ್ರಾಹ್ಮಣರು ಒಂದು ರೂಪಾಯಿ ಕೊಟ್ಟು ಹೂವು, ಊದಿನಕಡ್ಡಿ ತರೋದಿಲ್ಲ: ಕೆ.ಎನ್ ರಾಜಣ್ಣ

k n rajanna digital varthe

ದಾವಣಗೆರೆ: ಯಾವ ಬ್ರಾಹ್ಮಣರು ಕೂಡ ಒಂದು ರೂಪಾಯಿ ಕೊಟ್ಟು ಊದಿನಕಡ್ಡಿ ತರೋದಿಲ್ಲ, ಹಚ್ಚೋದಿಲ್ಲ ಎಂದು  ಸಹಕಾರ ಸಚಿವ ಕೆ.ಎನ್‌. ರಾಜಣ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ದಾವಣಗೆರೆ ಜಿಲ್ಲೆ, ಹರಿಹರ ತಾಲೂಕಿನ ರಾಜನಹಳ್ಳಿ‌ ವಾಲ್ಮೀಕಿ ಪೀಠದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಯಾರನ್ನೂ ಮೇಲ್ವರ್ಗದವರೆಂದು ಕರೆಯಬಾರದು, ಹಾಗೆ ಕರೆದರೆ ನಾವು ಕೆಳವರ್ಗದವರು ಎಂದಾಗುತ್ತದೆ. ನಾವೇನು ಕೆಳವರ್ಗದವರಾ ಎಂಬಿತ್ಯಾದಿ ವ್ಯಾಖ್ಯಾನಗಳನ್ನು ಮಾಡಿದ ಅವರು ಈಗಿನ ಸಾಮಾಜಿಕ ಸ್ಥಿತಿಗತಿಗಳನ್ನು ವಿವರಿಸುತ್ತಾ ಮೇಲಿನ ಮಾತನ್ನು ಹೇಳಿದರು. ಬ್ರಾಹ್ಮಣರು ಈಗ ಹೋಮ ಹವನ ಕಡಿಮೆ ಮಾಡಿದ್ದಾರೆ. ಆದರೆ ನಾವೇ ಶೂದ್ರರೇ ಹೆಚ್ಚು ಹೋಮ, ಹವನ ಮಾಡುತ್ತಿದ್ದೇವೆ. . ಅವರು ಒಂದು ರೂಪಾಯಿ ಖರ್ಚು ಮಾಡಿ ಹೂವ, ಊದುಬತ್ತಿ ತರಲ್ಲ, ಬೇರೆಯವರು ತಂದಿದ್ದರಲ್ಲಿ ಪೂಜೆ ಮಾಡ್ತಾರೆ, ಹೀಗೆ ಹೇಳಿದರೆ ನಾನು ಬ್ರಾಹ್ಮಣರ ವಿರೋಧಿ ಅಂತ ಅಲ್ಲ, ಇದು ನಾನು ಹೇಳಿದ್ದಲ್ಲ ನನ್ನ ಸ್ನೇಹಿತರು ಹೇಳಿದ್ದು ಎಂದರು.…

Read More