ರಾಜ್ಯದಾದ್ಯಂತ ಪತ್ರಕರ್ತರ ಕಲ್ಯಾಣಕ್ಕಾಗಿ ಕಾರ್ಯನಿರತ ಪತ್ರಕರ್ತರ ಸಂಘ ನಿರಂತರ ಶ್ರಮಿಸುತ್ತಿದೆ: ಜಿಲ್ಲಾಧ್ಯಕ್ಷ ಜಿ.ಶ್ರೀನಿವಾಸ್

ಸುಮಾರು ೯೦ ವರ್ಷ ಇತಿಹಾಸ ಹೊಂದಿರುವ ರಾಜ್ಯದ ಏಕೈಕ ಪತ್ರಕರ್ತರ ಸಂಘಟನೆಯಾಗಿದ್ದು ಪತ್ರಕರ್ತರ ಶ್ರೇಯೋಭಿವೃದ್ಧಿ ಹಗಲಿರುಳು ಶ್ರಮಿಸುತ್ತಿದೆ ಎಂದು ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಗ್ರಾಮಾಂತರ ಜಿಲ್ಲಾಧ್ಯಕ್ಷ ಜಿ.ಶ್ರೀನಿವಾಸ್ ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಗ್ರಾಮಾಂತರ ಜಿಲ್ಲಾ ಸಮಿತಿಯಿಂದ ಮಂಗಳವಾರ ಆಯೋಜಿಸಿದ್ದ ಸದಸ್ಯರ ಗುರುತಿನ ಚೀಟಿ ವಿತರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಇದನ್ನೂ ಓದಿ: ಬಿಜೆಪಿಗೆ ಯಗ್ಗಾಮುಗ್ಗಾ ತರಾಟೆಗೆ ತೆಗೆದುದುಕೊಂಡ ಶಾಸಕ ಶಿವಲಿಂಗೆಗೌಡ ರಾಜ್ಯದಾದ್ಯಂತ ಪತ್ರಕರ್ತರ ಕಲ್ಯಾಣಕ್ಕಾಗಿ ಕಾರ್ಯನಿರತ ಪತ್ರಕರ್ತರ ಸಂಘ ನಿರಂತರ ಶ್ರಮಿಸುತ್ತಿದೆ. ಪತ್ರಕರ್ತರು ಸಮಾಜಮುಖಿ ಕಾರ್ಯಕ್ಕೂ ಹೆಚ್ಚಿನ ಅಧ್ಯತೆ ನೀಡಬೇಕು. ಸಂಘದ ಕಚೇರಿ ನಿರ್ಮಾಣಕ್ಕೆ ಅಗತ್ಯವಿರುವ ಜಾಗದ ವ್ಯವಸ್ಥೆ ಮುಂದಾಗಬೇಕು. ಸಂಘದ ರಾಜ್ಯಾಧ್ಯಕ್ಷ ಶಿವಾನಂದತಗಡೂರು ಅವರ ನೇತೃತ್ವದಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ಪತ್ರಕರ್ತರಿಗೆ ಸರ್ಕಾರದಿಂದ ಸಾಕಷ್ಟು ಅನುದಾನವನ್ನು ನೀಡಲಾಗುತ್ತಿದೆ ಎಂದರು. ಇದನ್ನೂ ಓದಿ: ಜಾದು ಮಾಡಲು ಹೋಗಿ ನಡೆಯಿತು ಅವಘಡ,…

Read More