ಸಿದ್ದಗಂಗಾ ಫೌಂಡೇಷನ್‌ ಟ್ರಸ್ಟ್‌ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

ನೆಲಮಂಗಲ: ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಉನ್ನತ ಸಾಧನೆಗೆ ಪ್ರೇರಣೆಯಾಗಲಿದೆ ಎಂದು ರಂಗಶಿಕ್ಷಣ ಕೇಂದ್ರ ಸಂಸ್ಥಾಪಕ ಅಧ್ಯಕ್ಷ ಸಿ.ಸಿದ್ಧರಾಜು ತಿಳಿಸಿದರು. ತಾಲೂಕಿನ ಯಂಟಗಾನಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಬಾವಿಕೆರೆ ಗ್ರಾಮದಲ್ಲಿ ಭಾನುವಾರ ಶ್ರೀ ಸಿದ್ಧಗಂಗಾ ಫೌಂಡೇಶನ್ ಟ್ರಸ್‌ನಿಂದ ಆಯೋಜಿಸಿದ್ದ ನೂತನ ಟ್ರಸ್ಟ್ ಉದ್ಘಾಟನಾ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬ ವಿದ್ಯಾರ್ಥಿಗಳು ಶೈಕ್ಷಣಿಗೆ ಅಭಿವೃದ್ಧಿ ಹೊಂದಿದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ. ಮಕ್ಕಳಿಗೆ ಒಳ್ಳೆಯ ಶಿಕ್ಷಣದ ಜತೆಗೆ ಸಮಾಜದೊಂದಿಗೆ ಬದುಕಲು ಬೇಕಾದ ಸಂಸ್ಕಾರಯುತ ಗುಣಗಳನ್ನು ಕಲಿಸುವ ಕೆಲಸ ಪಾಲಕರಿಂದ ಆಗಬೇಕು. ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು ಗಳಿಸುವ ಧೈರ್ಯ ಆತ್ಮವಿಶ್ವಾಸವನ್ನು ಮಕ್ಕಳಲ್ಲಿ ಬೆಳೆಸಬೇಕು. ಶ್ರೀ ಸಿದ್ಧಗಂಗಾ ಮಠದ ಶಿವಕುಮಾರಸ್ವಾಮೀಜಿ ಅವರ ತತ್ವಾದರ್ಶನಗಳನ್ನು ಮುಂದಿಟ್ಟುಕೊಂಡು ಟ್ರಸ್ಟ್ ಮಾಡಿರುವ ಸಂತೋಷಕರ ಸಂಗತಿ. ಪ್ರತಿಭಾವಂತರನ್ನು ಗುರುತಿಸಿ ಪ್ರೋತ್ಸಾಹಿಸಬೇಕಾದ ಸಮಾಜದ ಜವಬ್ದಾರಿ ಪ್ರತಿಭಾ ಪುರಸ್ಕಾರದಿಂದ ವಿದ್ಯಾರ್ಥಿಗಳ ಜತೆ ಸಮಾಜವಿದೆ ಎಂಬುದು ತಿಳಿಯಲಿದೆ. ಪ್ರತಿಭಾವಂತರು…

Read More