ವಾಲ್ಮಿಕಿ ಸಮಾಜದಿಂದ ಶಾಸಕರು, ಸಚಿವರು, ಪರಿಷತ್ ಸದಸ್ಯರಿಗೆ ಅಭಿನಂದನಾ ಸಮಾರಂಭ: ಪುರುಷೋತ್ತಮ್

ಮಧುಗಿರಿ: ಜಿಲ್ಲಾ ವಾಲ್ಮೀಕಿ ಸಮಾಜದ ವತಿಯಿಂದ ನೂತನ ಸಚಿವರು , ಶಾಸಕರು , ವಿಧಾನ ಪರಿಷತ್ ಸದಸ್ಯರು ಹಾಗೂ ಸಂಸದರಿಗೆ ಅಭಿನಂದನಾ ಸಮಾರಂಭವನ್ನು ಹಮ್ಮಿ ಕೊಳ್ಳಲಾಗಿದೆ ಎಂದು ಸಮಾಜದ ಜಿಲ್ಲಾ ಅಧ್ಯಕ್ಷ ಪುರುಷೋತ್ತಮ್ ತಿಳಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಅಭಿನಂದನಾ ಸಮಾರಂಭದ ಭಿತ್ತಿ ಪತ್ರಗಳನ್ನು ಬಿಡುಗಡೆ ಮಾಡಿ ನಂತರ ಮಾತನಾಡಿದ ಅವರು ತುಮಕೂರಿನ ಅಮಾನಿಕೆರೆಯ ಗಾಜಿನ ಮನೆಯಲ್ಲಿ ಬೃಹತ್ ಅಭಿನಂದನಾ ಸಮಾರಂಭವನ್ನು ಶ್ರೀ ವಾಲ್ಮೀಕಿ ಪ್ರಸನ್ನಾಂದ ಪುರಿ ಸ್ವಾಮೀಜಿ , ಶಿಡ್ಲೇಕೋಣದ ಶ್ರೀ ಸಂಜಯ್ ಕುಮಾರ ಸ್ವಾಮೀಜಿ ಯವರ ದಿವ್ಯ ಸಾನಿಧ್ಯದೊಂದಿಗೆ ಜೂ.25 ರ ಭಾನುವಾರ ಬೆಳಗ್ಗೆ 10:30 ಘಂಟೆಗೆ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ರಾಜ್ಯದ ವಾಲ್ಮೀಕಿ ಸಮುದಾಯದ ನೂತನ ಸಚಿವರು , ಶಾಸಕರು , ವಿಧಾನ ಪರಿಷತ್ ಸದಸ್ಯರು ಮತ್ತು ಸಂಸದರನ್ನು ಜಿಲ್ಲಾ ಸಂಘ ಹಾಗೂ ನಾಯಕ ಸಂಘಟನೆ ಮತ್ತು ಸಂಸ್ಥೆ ಗಳ ವತಿಯಿಂದ ಅಭಿನಂದಿಸಲಾಗುತ್ತಿದ್ದು ,…

Read More